ಉಡುಪಿ, ಜ.3: ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿ ಜನವರಿ 2ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
157 ಸೆ.ಮೀ.ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡು ಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
