ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಪಾರ್ ಜಾಯ್ ಚಂಡಮಾರುತ ಪ್ರಭಾವದ ಕಾರಣ ಜೂನ್ 15 ರವರೆಗೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಕಾರ್ಯಾಚರಣೆ ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರಿಂದಾಗಿ ಕರಾವಳಿ ಪ್ರದೇಶಗಳಲ್ಲಿ ದೋಣಿಗಳನ್ನು ಎತ್ತರದ ಪ್ರದೇಶಕ್ಕೆ ಮೀನುಗಾರರು ಸ್ಥಳಾಂತರಿಸಿದ್ದಾರೆ. Due to the extremely severe cyclonic storm #Biparjoy over the east-central Arabian Sea IMD urges for total suspension of fishing operations in the Arabian Sea till June 15 https://t.co/W9xeQPH3c1— Karnataka State Natural Disaster Monitoring Centre (@KarnatakaSNDMC) June 12, 2023
ಕರಾವಳಿ ಕರ್ನಾಟಕ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಮುಂಗಾರು ಮಳೆ ನಿರೀಕ್ಷೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚಿಕ್ಕಮಗಳೂರು, ಹಾಸನ ,ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂಬ ಎಚ್ಚರಿಕೆ ಸಿಕ್ಕಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
