ಉಡುಪಿ, ಜ.3: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ನಿವಾಸಿ ಪ್ರಸನ್ನ (43) ಎಂಬವರು 2021ರ ಅ.26ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.
