ಶಿವಮೊಗ್ಗ ಹೊರವಲಯದ ಶಾಂತಿನಗರ ರಾಗಿಗುಡ್ಡದಲ್ಲಿ ನಿನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ಸಣ್ಣ ಗಲಭೆಯಾಗಿದೆ, ಪೊಲೀಸರು ನಿಯಂತ್ರಣ ಮಾಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಇಂದು ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು: ಶಿವಮೊಗ್ಗ ಹೊರವಲಯದ ಶಾಂತಿನಗರ ರಾಗಿಗುಡ್ಡದಲ್ಲಿ ನಿನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ಸಣ್ಣ ಗಲಭೆಯಾಗಿದೆ, ಪೊಲೀಸರು ನಿಯಂತ್ರಣ ಮಾಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಇಂದು ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗ ಘಟನೆಯೇನು ಹೊಸದಲ್ಲ, ಈ ಹಿಂದೆಯೂ ಇಂತಹ ಘಟನೆಯಾಗಿವೆ. ನಮ್ಮ ಪೊಲೀಸರು ನಿಯಂತ್ರಣ ಮಾಡಿದ್ದಾರೆ. ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ನಮಗೆ ಮೊದಲೇ ಮಾಹಿತಿಯಿತ್ತು. ಹೀಗಾಗಿ ಮೊದಲೇ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು. ಮೆರವಣಿಗೆ ಹೋಗುವ ಸಂದರ್ಭದಲ್ಲಿ ಯಾವುಗೇ ಅಹಿತಕರ ಘಟನೆ ನೀಡಬಹುದು ಎಂದು ನಮಗೆ ಮೊದಲೇ ಗೊತ್ತಿತ್ತು, ದೊಡ್ಡ ಮಟ್ಟದಲ್ಲಿ ಆಗುವ ಗಲಭೆಯನ್ನು ಸಮರ್ಥರಾಗಿರುವ ನಮ್ಮ ಪೊಲೀಸರು ನಿಯಂತ್ರಣ ಮಾಡಿದ್ದಾರೆ ಎಂದರು.
