ಮುಂಬೈ: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ಭಾರತ ಬುಧವಾರ, ಅಫ್ಘಾನಿಸ್ತಾನದ ವಿರುದ್ಧ ಕಣಕ್ಕಿದಿದೆ. ಈ ನಡುವೆ ಟೀಂ ಇಂಡಿಯಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ (Vikram Rathour) ಅವರು ಶುಭಮನ್ ಗಿಲ್ (Shubman Gill) ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಗಿಲ್ ಅವರು ಚೇತರಿಕೆ ಹಂತದಲ್ಲಿದ್ದು, ಚೆನ್ನೈನ ಹೋಟೆಲ್ಗೆ (Chennai Hotel) ಮರಳಿದ್ದಾರೆ. ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದರಿಂದ ಅವರು ಆಸೀಸ್ ವಿರುದ್ಧ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದರು. ಅಲ್ಲದೇ ವಿಶ್ರಾಂತಿಗಾಗಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಸದ್ಯ ಅವರು ಚೆನ್ನೈನಲ್ಲೇ ಇದ್ದು, ವೈದ್ಯಕೀಯ ತಂಡ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗಿಲ್ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಮುಂಜಾಗ್ರತಾ ಕ್ರಮವಾಗಿ ಹೋಟೆಲ್ಗೆ ಮರಳಿದ್ದು, ಚೇರಿಸಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಟೀಂ ಇಂಡಿಯಾದ ಪ್ಲೇಯಿಂಗ್-11 ನಲ್ಲಿ ಸೇರಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ
The post ಶುಭಮನ್ ಗಿಲ್ ಆರೋಗ್ಯದ ಬಗ್ಗೆ ಟೀಂ ಇಂಡಿಯಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಹೇಳಿದ್ದೇನು? appeared first on Ain Live News.
