ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ ಉಪಕಾರಿ, ನನ್ನ ರೋಷ ನೂರು ವರುಷ ಮುಂತಾದ ಚಿತ್ರಗಳನ್ನು ಜೋ ಸೈಮನ್ ನಿರ್ದೇಶಿಸಿದ್ದಾರೆ.
