ಬೆಂಗಳೂರು;- ಕೇಂದ್ರ ತಂಡಕ್ಕೆ ನಮ್ಮ ವಸ್ತುಸ್ಥಿತಿಯ ಮನವಿ ಮನವರಿಕೆಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಬರ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ತಂಡಕ್ಕೆ ನಾವು ಪರಿಸ್ಥಿತಿಯನ್ನು ವಸ್ತುಸ್ಥಿತಿಯಿಂದ ವಿವರಿಸಿದ್ದು, ಅವರಿಗೆ ಮನವರಿಕೆಯಾಗಿದೆ.
ಕೇಂದ್ರ ಬರ ಅಧ್ಯಯನ ತಂಡ ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲಿ ವರದಿ ಸಲ್ಲಿಸಲಿದೆ. ಎಷ್ಟು ಪರಿಹಾರ ಕೊಡುತ್ತಾರೆ ನೋಡೋಣ. ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿದ ತಂಡ ಪರಿಸ್ಥಿತಿ ಅವಲೋಕನ ಮಾಡಿದೆ. ಕುಡಿಯುವ ನೀರು, ನರೇಗಾ ಕಾಮಗಾರಿ, ಮೇವು ಪರಿಸ್ಥಿತಿ ಅವಲೋಕಿಸಿದ್ದಾರೆ. ನಮ್ಮ ಮನವಿ ಆಧಾರದಲ್ಲಿ ಬರ ಅಧ್ಯಯನ ತಂಡ ಬಂದು ರಾಜ್ಯದಲ್ಲಿ ಪ್ರವಾಸ ಮಾಡಿದೆ. ಪರಿಶೀಲನೆ ಸಂದರ್ಭದಲ್ಲಿ ನಮ್ಮ ಮನವಿ ವಸ್ತುಸ್ಥಿತಿಯಿಂದ ಕೂಡಿತ್ತು. ತಳಮಟ್ಟದಲ್ಲಿ ಸಾಕಷ್ಟು ರೈತರಿಗೆ ಬೆಳೆ ಹಾನಿ ತೊಂದರೆ ಆಗಿದೆ ಎಂದು ಮನವರಿಕೆಯಾಗಿದೆ. ಹಿಂಗಾರು ಮಳೆ ತೊಂದರೆ ಆಗಬಹುದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ವಿಚಿತ್ರ ಹವಾಮಾನ ಪರಿಸ್ಥಿತಿ ಇದೆ. ಕೆಲವು ತಿಂಗಳಲ್ಲಿ ವಾಡಿಕೆಗಿಂತ ಮಳೆ ಜಾಸ್ತಿಯಾದರೆ, ಕೆಲವು ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ. ಮಳೆ ಸ್ಥಿತಿಗತಿಗಳ ಬಗ್ಗೆ ಸ್ಪಷ್ಟತೆ ಇಲ್ಲದ ವಾತಾವರಣವಿದೆ. ಹವಾಮಾನ ಏರುಪೇರನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಇದಕ್ಕನುಗುಣವಾಗಿ ಸರ್ಕಾರದ ನೀತಿ, ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವರಿಕೆ ಮಾಡಿದ್ದೇವೆ” ಎಂದು ಹೇಳಿದರು.
The post ಹಿಂಗಾರು ಮಳೆ ಕೊರತೆ, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದು -ಕೃಷ್ಣ ಬೈರೇಗೌಡ appeared first on Ain Live News.
